ಚಿತ್ರದುರ್ಗ: ಬಿಜೆಪಿ ಪರ ಪ್ರಚಾರ ಮಾಡಿದ್ದ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.
ರಾಜಕೀಯ ಪಕ್ಷದ ಪರ ಪ್ರಚಾರ ಮಾಡಿದ ಕಾನ್‌ಸ್ಟೆಬಲ್ ಶಿವಮೂರ್ತಿ, ಫಿರ್ದೋಸ್, ತಿಮ್ಮೇಶ್ ತಿಮ್ಮರಾಯಪ್ಪ, ಮೌನೇಶ್ವರ್ ವಿರುದ್ಧ ಚುನಾವಣಾಧಿಕಾರಿಗೆ ಕಾಂಗ್ರೆಸ್ ದೂರು ನೀಡಿತ್ತು.
ಈ ಹಿನ್ನೆಲೆ ನಾಲ್ವರು ಪೊಲೀಸರನ್ನು ಎಸ್‌ಪಿ ವರ್ಗಾವಣೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮತ್ತೆ ಮೂವರು ಸರ್ಕಾರಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.