ದೆಹಲಿ: ರಾಜ್ಯದಲ್ಲಿ ಮುಸ್ಲಿಮರಿಗೆ ನೀಡಿರುವ ಮೀಸಲಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮ ʻತಪ್ಪಾದ ಗ್ರಹಿಕೆʼ ಕ್ರಮ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ. 4 ಮೀಸಲಾತಿ ರದ್ದುಪಡಿಸಲಾಗಿತ್ತು. ಆ ಮೀಸಲಾತಿಯನ್ನು ಒಕ್ಕಲಿಗ ಮತ್ತು ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ನೀಡಿತ್ತು. ಇದನ್ನು ಪ್ರಶ್ನೆಸಿ ಸುಪ್ರೀಂ ಕೊರ್ಟ್ ಸರಕಾರದ ಗ್ರಹಿಕೆ ಸರಿಇಲ್ಲ ಎಂದು ಹೇಳಿದೆ.