ಬೆಂಗಳೂರು : ಮತ್ತೊಮ್ಮೆ ಕಳಪೆ ಆಹಾರ ಪದಾರ್ಥಗಳ ವಿರುದ್ಧ ಆಹಾರ ಇಲಾಖೆ ಸಮರ ಸಾರಿದ್ದು, ಪನ್ನೀರ್ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ. ಪನ್ನೀರ್‌ನಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆಯಾಗಿದೆ ಎಂಬುದು ಆಹಾರ ಸುರಕ್ಷತಾ ಇಲಾಖೆ ವರದಿಯಲ್ಲಿ ಪತ್ತೆಯಾಗಿದೆ.
ಇತ್ತೀಚೆಗಷ್ಟೇ ಪನ್ನೀರ್ ಸೇರಿ ಇತರೆ ಆಹಾರ ಉತ್ಪನ್ನಗಳ ಸ್ಯಾಂಪಲ್ ಪಡೆದು ಟೆಸ್ಟ್ಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಪನ್ನೀರ್‌ನ್ನು ಮೆದುವಾಗಿಸಲು ಬಳಸುವ ಕೆಮಿಕಲ್ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ವರದಿ ತಿಳಿಸಿದೆ.
ಕಲಬೆರಕೆ ಹಿನ್ನೆಲೆ ಕಳೆದ ಹಲವು ದಿನಗಳ ಹಿಂದೆ ಬೆಂಗಳೂರು ಸೇರಿ ಹಲವೆಡೆ ಆಹಾರ ಇಲಾಖೆ ಪನ್ನೀರ್ ಸ್ಯಾಂಪಲ್ ಸಂಗ್ರಹಿಸಿತ್ತು. ಆಹಾರ ಗುಣಮಟ್ಟ ಇಲಾಖೆಯಿಂದ ಪನ್ನೀರ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಇದೀಗ ಲ್ಯಾಬ್ ರಿಪೋರ್ಟ್ ಆಹಾರ ಇಲಾಖೆ ಕೈಸೇರಿದ್ದು, ವರದಿಯಲ್ಲಿ ಅಸುರಕ್ಷಿತ ಅಂಶ ಇರೋದು ಪತ್ತೆಯಾಗಿದೆ.
ಪನ್ನೀರ್‌ನಲ್ಲಿ ಕ್ಯಾಲ್ಸಿಯಂ ಹಾಗೂ ಪ್ರೋಟಿನ್ ಪ್ರಮಾಣ ಕಡಿಮೆಯಿರುವುದು ವರದಿಯಲ್ಲಿ ಕಂಡುಬಂದಿದೆ. ಪನ್ನೀರ್ ತಯಾರಿಸುವಾಗ ಕಡಿಮೆ ಪ್ರಮಾಣದ ಕ್ಯಾಲ್ಸಿಯಂ ಹಾಗೂ ಪ್ರೋಟಿನ್‌ಅನ್ನು ಬಳಸುತ್ತಾರೆ ಮತ್ತು ಪನ್ನೀರ್‌ನ್ನು ಮೆದುವಾಗಿಸಲು ಕೆಮಿಕಲ್ ಬಳಸುತ್ತಾರೆ. ಈ ಕೆಮಿಕಲ್ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ.
ಇನ್ನು ಆಹಾರ ಇಲಾಖೆ ಇಷ್ಟಕ್ಕೆ ಸುಮ್ಮನಾಗದೇ ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ವಿರುದ್ಧವೂ ಸಮರ ಸಾರಿದೆ. ಈಗಾಗಲೇ ಅಧಿಕಾರಿಗಳು ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಘಟಕಗಳ ಮೇಲೆ ಎಫ್‌ಎಸ್‌ಎಸ್‌ಎಐ ದಾಳಿ ಮಾಡಿದ್ದಾರೆ. ಬೆಂಗಳೂರು ನಗರ ಹಾಗೂ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು, ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿದ್ದಾರೆ.