ಕೋಲಾರ: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಎಡಗಿನಬೆಲೆ ಸಮೀಪ ನಡೆದಿದೆ.
ಮಾಲೂರು ತಾಲೂಕಿನ ಎಡಗಿನಬೆಲೆ ಟೋಲ್ ಬಳಿ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತನ್ನು ಮಾಲೂರು ಠಾಣೆ ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
 
				 
         
         
         
															 
                     
                     
                    


































 
    
    
        