ಒಂದು ವರ್ಷದ ಹಿಂದೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾದ ನೇಹಾ ಹಿರೇಮಠ ಅವರ ಕಾಲೇಜು ಕ್ಯಾಂಪಸ್ ನಲ್ಲಿ ಹಾಡುಹಗಲೇ ನಡೆದ ಕೊಲೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಹಾಗೂ ರಾಜ್ಯಾದ್ಯಂತ ಕ್ಯಾಂಪಸ್ಗಳಲ್ಲಿ ಭಯದ ವಾತಾವರಣವನ್ನು ಹೋಗಲಾಡಿಸಲು ಸೂಕ್ತ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನಗರದ ಜೋಡುಕಟ್ಟೆಯಿಂದ ಪ್ರಾರಂಭವಾಗಿ ಸರ್ವಿಸ್ ಬಸ್ ಸ್ಟ್ಯಾಂಡ್, ಕ್ಲಾಕ್ ಟವರ್ ವರೆಗೆ ನಡೆದ ಪ್ರತಿಭಟನಾ ಜಾತದ ವಿರುದ್ಧ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಬಿವಿಪಿಯ 15 ವಿದ್ಯಾರ್ಥಿ ನಾಯಕರ ಮೇಲೆ ಐಪಿಸಿ ಕಲಂ 143, 147, 341, 290, 149 ರಂತೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣವನ್ನು ಮೊದಲ ಹಂತದಲ್ಲಿ ಉಡುಪಿಯ ನ್ಯಾಯಾಲಯದಲ್ಲಿ ವಕೀಲರಾದ ಶ್ರೀನಿಧಿ ಹೆಗ್ಡೆ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಜಾಮೀನನ್ನು ಪಡೆಯಲು ಯಶಸ್ವಿಯಾದರೆ ನಂತರ ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ರಿಟ್ ಪೆಟಿಷನ್ ಆಲಿಸಿದ ಎಸ್.ಆರ್ ಕೃಷ್ಣಕುಮಾರ್ ನೇತೃತ್ವದ ಏಕ ಸದಸ್ಯ ಪೀಠ ವಿದ್ಯಾರ್ಥಿಗಳ ವಿರುದ್ಧ ಇರುವ ಪ್ರಕರಣವನ್ನು ವಜಾಗೊಳಿಸಿ ವಿದ್ಯಾರ್ಥಿಗಳ ಪ್ರತಿಭಟನೆಯ ಹಕ್ಕನ್ನು ಎತ್ತಿ ಹಿಡಿದಿದೆ.
ಕರ್ನಾಟಕ ಹೈಕೋರ್ಟ್ ಹಿರಿಯ ನ್ಯಾಯವಾದಿಯಾದ ಅರುಣ್ ಶ್ಯಾಮ್ ರವರ ಮಾರ್ಗದರ್ಶನದಲ್ಲಿ ಶ್ರೀ ಸುಯೋಗ್ ಇವರು ಮಂಡಿಸಿದ ರಿಟ್ ಪೆಟಿಷನ್ ನಲ್ಲಿ ವಕೀಲರಾದ ಶ್ರೀರಾಮ ಅಂಗೀರಸ, ನಿಶಾಂತ್ ಎಸ್.ಕೆ, ರಿತೀಕ್ ವೈ.ಎಂ, ಜಾಗೃತ್, ಚೈತ್ರ ಶ್ರೀಹರಿ, ರಾಧಿಕಾ, ತುಷಾರ್ ಇವರು ಅಡ್ವೊಕೇಟ್ ಆನ್ ರೆಕಾರ್ಡ್ ಆಗಿದ್ದರು.