ನವದೆಹಲಿ: ಕೇಂದ್ರೀಯ ಶಾಲಾ ಪರೀಕ್ಷಾ ಮಂಡಳಿಯ (ಸಿಬಿಎಸ್‌ಇ) 2024ನೇ ಸಾಲಿನ 12 ನೇ ತರಗತಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಒಟ್ಟು ಶೇ 87.98 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಪ್ರದೇಶವಾರು ಫಲಿತಾಂಶದಲ್ಲಿ ತಿರುವನಂತಪುರಂ ಪ್ರದೇಶವು ಅಗ್ರಸ್ಥಾನದಲ್ಲಿದ್ದರೆ, ಬೆಂಗಳೂರು ಪ್ರದೇಶವು ನಾಲ್ಕನೇ ಸ್ಥಾನದಲ್ಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 0.65 ರಷ್ಟು ಫಲಿತಾಂಶ ಹೆಚ್ಚು ಬಂದಿದೆ. ಬಾಲಕರಿಗಿಂತ ಬಾಲಕಿಯರೇ ಮೇಲುಗೈ ಸಾಧಿಸಿದ್ದು ಶೇ 91 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ.
24 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇಕಡಾ 95ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. 1.16 ಲಕ್ಷ ವಿದ್ಯಾರ್ಥಿಗಳು ಶೇ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. ಈ ವರ್ಷ ಒಟ್ಟು 16,21,224 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಫಲಿತಾಂಶ ವೀಕ್ಷಿಸಲು cbse.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.