ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೇ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ವಕೀಲ ದೇವರಾಜೇಗೌಡ ಅವರು ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೇ ವಿಡಿಯೋವನ್ನು ಹಂಚಿಕೊಂಡಿರುವ ಜೆಡಿಎಸ್ ಟ್ವೀಟ್‌ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೆಸರು ಕೆಡಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನನಗೆ ಕೋಟಿ ಆಫರ್ ನೀಡಿದ್ದರು ಎಂದು ವಕೀಲ ದೇವರಾಜೇಗೌಡ ಗಂಭೀರವಾದ ಆರೋಪ ಮಾಡಿದ್ದರು.
ಈಗ ಇವರ ಹೇಳಿಕೆಯ ಬೆನ್ನಲ್ಲೇ ಜೆಡಿಎಸ್ ಟ್ವೀಟ್ ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ‘CD’ ಶಿವಕುಮಾರ್ ಪೆನ್‌ಡ್ರೈವ್ ಗ್ಯಾಂಗ್
1) ಡಿಸಿಎಂ ಡಿ.ಕೆ.ಶಿವಕುಮಾರ್
2) ಕೃಷಿ ಸಚಿವ ಚೆಲುವರಾಯಸ್ವಾಮಿ
3) ಕಂದಾಯ ಸಚಿವ ಕೃಷ್ಣಭೈರೇಗೌಡ
4) IT BT ಸಚಿವ ಪ್ರಿಯಾಂಕ್ ಖರ್ಗೆ
5) ಇನ್ನೂ ಒಬ್ಬ ಸಚಿವ + ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ
ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರಮೋದಿ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದು. ಈ ಸಂಚು ಸಾಕಾರಗೊಳಿಸಲು CDಶಿವಕುಮಾರ್ ಸಾಹೇಬರು ವಕೀಲರಾದ ಶ್ರೀ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ 100 ಕೋಟಿ ರೂಪಾಯಿ! ಎಂದು ಬರೆದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಕಾಂಗ್ರೆಸ್ ಪಕ್ಷವನ್ನು ಕುಟುಕಿದೆ.