ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳ ಪಡಿತರ ಕುರಿತು ಕೇಂದ್ರ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ಏನದು ಆದೇಶ ಎಂಬುದರ ಕುರಿತು ಇಲ್ಲಿದೆ ನೋಡಿ.
ಮೂರು ತಿಂಗಳ ಪಡಿತರ ಒಂದೇ ಬಾರಿಗೆ:
ಹೌದು, ಪಡಿತರ ವಿತರಣೆಯ ಕುರಿತು ಕೇಂದ್ರವು ಮಹತ್ವದ ಆದೇಶವನ್ನು ಹೊರಡಿಸಿದೆ. 3 ತಿಂಗಳ ಪಡಿತರ ಕೋಟಾವನ್ನು ಒಂದೇ ಬಾರಿಗೆ ವಿತರಿಸಬೇಕು. ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳ ಪಡಿತರ ಕೋಟಾವನ್ನು ಫಲಾನುಭವಿಗಳಿಗೆ ಏಕಕಾಲದಲ್ಲಿ ವಿತರಿಸುವಂತೆ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ಎಲ್ಲಾ ರಾಜ್ಯಗಳ ನಾಗರಿಕ ಸರಬರಾಜು ಅಧಿಕಾರಿಗಳಿಗೆ ಪತ್ರ ಬರೆದಿದೆ.
ಮುನ್ನೆಚ್ಚರಿಕ ಕ್ರಮವಾಗಿ ಈ ನಿರ್ಧರ:
ಮಳೆಗಾಲವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರವು ಈ ನಿರ್ಧಾರ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಮಳೆಗಾಲದಲ್ಲಿ ಆಹಾರ ಧಾನ್ಯಗಳ ಸಂಗ್ರಹಣೆ ಮತ್ತು ಸಾಗಣೆಯಲ್ಲಿ ತೊಂದರೆಗಳು ಉಂಟಾಗಬಹುದು ಎಂದು ಕೇಂದ್ರವು ನಂಬುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ, ಒಂದು ತಿಂಗಳಲ್ಲಿ 3 ತಿಂಗಳ ಪಡಿತರವನ್ನು ನೀಡಲು ನಿರ್ಧರಿಸಲಾಗಿದೆ.
ಮೇ 31ರೊಳಗೆ ಪಡಿತರ ವಿತರಣೆ:
ಮೇ 31 ರೊಳಗೆ ಫಲಾನುಭವಿಗಳಿಗೆ ಪಡಿತರ ವಿತರಿಸಬೇಕು. ಇದಕ್ಕಾಗಿ, ಎಫ್‌ಸಿಐ ಗೋದಾಮುಗಳಲ್ಲಿ ಸಾಕಷ್ಟು ದಾಸ್ತಾನು ಇದೆ ಎಂದು ಖಚಿತಪಡಿಸಿಕೊಳ್ಳುವುದು ಅವಶ್ಯಕ. ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯದಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅದು ಆದೇಶಿಸಿದೆ.