ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಾಲುಕ್ಯ ನವೀನ್ ಇಂದು ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರಾಗಿ ಹೆಂಜೆರಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕುಮಾರ್, ಖಜಾಂಚಿಯಾಗಿ ಲೋಕೇಶ್, ಜಿಲ್ಲಾ ಪ್ರತಿನಿಧಿಯಾಗಿ ಟಿ ಕೇಶವರವರು ಆಯ್ಕೆಯಾಗಿದ್ದಾರೆಂದು ಸಹಾಯಕ ಕೃಷಿ ನಿರ್ದೇಶಕರಾದ ಅಶೋಕ್ ರವರು ತಿಳಿಸಿದ್ದಾರೆ.