ನವದೆಹಲಿ : ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಕೊನೆಗೂ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಇದರೊಂದಿಗೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೂ ಭಾರತ ತಂಡವನ್ನು ಪ್ರಕಟಿಸಲಾಗಿದೆ.
15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕರಾಗಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಫಿಟ್ನೆಸ್ ಸಮಸ್ಯೆಗೆ ಒಳಗಾಗಿದ್ದ ಜಸ್ಪ್ರೀತ್ ಬುಮ್ರಾ ಅವರನ್ನು ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿದೆ.
ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, ಇದೀಗ ಟೀಂ ಇಂಡಿಯಾ ಪ್ರಕಟಣೆಯ ಜೊತೆಗೆ ಒಟ್ಟು 7 ತಂಡಗಳ ಪಟ್ಟಿ ಹೊರಬಿದ್ದಂತ್ತಾಗಿದೆ. ಪಾಕಿಸ್ತಾನವನ್ನು ಹೊರತುಪಡಿಸಿ ಇಂಗ್ಲೆಂಡ್, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಹಾಗೂ ಭಾರತ ತಮ್ಮ ತಮ್ಮ ತಂಡಗಳನ್ನು ಘೋಷಿಸಿವೆ.