ಮುಂಬೈ:ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ದುಬೈನತ್ತ ಪ್ರಯಾಣ ಬೆಳೆಸಿದೆ.
ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಬುಧವಾರದಿಂದ ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.
ಇನ್ನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ ಟೀಮ್ ಇಂಡಿಯಾ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಅದರಂತೆ ಫೆಬ್ರವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ಆರಂಭಿಸಲಿದೆ. ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಈ ಕೆಳಗಿನಂತಿದೆ.
ಭಾರತ vs ಬಾಂಗ್ಲಾದೇಶ್: ಫೆಬ್ರವರಿ 20 (ದುಬೈ)
ಭಾರತ vs ಪಾಕಿಸ್ತಾನ್: ಫೆಬ್ರವರಿ 23 (ದುಬೈ)
ಭಾರತ vs ನ್ಯೂಝಿಲೆಂಡ್: ಮಾರ್ಚ್ 2 (ದುಬೈ)
ಸೆಮಿಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 4 (ದುಬೈ)
ಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 9 (ದುಬೈ)
ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2.30 ರಿಂದ ಶುರುವಾಗಲಿದೆ. ಅಲ್ಲದೆ ಈ ಮ್ಯಾಚ್ಗಳನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಹಾಗೂ ಜಿಯೋ ಹಾಟ್ಸ್ಟಾರ್ನಲ್ಲಿ ಲೈವ್ ವೀಕ್ಷಿಸಬಹುದು.
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.