ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.