ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ
ವಚನ:
ಕಂದಿಸಿ ಕುಂದಿಸಿ ಬಂಧಿಸಿ ಕಂಡವರ ಬೇಡಿತಂದು
ಜಂಗಮಕ್ಕೆ ಮಾಡಿದೆನೆಂಬ ದಂದುಗದೋಗರ ಲಿಂಗಕ್ಕೆ
ನೈವೇದ್ಯ ಸಲ್ಲ.
ತನು ಕರಗಿ ಮನ ಬಳಲಿ ಬಂದ ಚರದ ಅನುವರಿತು
ಸಂದಿಲ್ಲದೆ ಸಂಶಯವಿಲ್ಲದೆ ಜಂಗಮಲಿಂಗಕ್ಕೆ
ದಾಸೋಹವ ಮಾಡುವುದೆ ಮಾಟ.
ಕಾಶಿಯಕಾಯಿ ಕಾಡಿನ ಸೊಪ್ಪಾಯಿತ್ತಾದಡೂ
ಕಾಯಕದಿಂದ ಬಂದುದು ಲಿಂಗಾರ್ಪಿತ.
ಚನ್ನಬಸವಣ್ಣಪ್ರಿಯ ಚಂದೇಶ್ವರಲಿಂಗಕ್ಕೆ ನೈವೇದ್ಯಸಂದಿತ್ತು.
-ನುಲಿಯ ಚಂದಯ್ಯ

































