ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕಂದಿಸಿ ಕುಂದಿಸಿ ಬಂಧಿಸಿ ಕಂಡವರ ಬೇಡಿತಂದು
ಜಂಗಮಕ್ಕೆ ಮಾಡಿದೆನೆಂಬ ದಂದುಗದೋಗರ ಲಿಂಗಕ್ಕೆ
ನೈವೇದ್ಯ ಸಲ್ಲ.
ತನು ಕರಗಿ ಮನ ಬಳಲಿ ಬಂದ ಚರದ ಅನುವರಿತು
ಸಂದಿಲ್ಲದೆ ಸಂಶಯವಿಲ್ಲದೆ ಜಂಗಮಲಿಂಗಕ್ಕೆ
ದಾಸೋಹವ ಮಾಡುವುದೆ ಮಾಟ.
ಕಾಶಿಯಕಾಯಿ ಕಾಡಿನ ಸೊಪ್ಪಾಯಿತ್ತಾದಡೂ
ಕಾಯಕದಿಂದ ಬಂದುದು ಲಿಂಗಾರ್ಪಿತ.
ಚನ್ನಬಸವಣ್ಣಪ್ರಿಯ ಚಂದೇಶ್ವರಲಿಂಗಕ್ಕೆ ನೈವೇದ್ಯಸಂದಿತ್ತು.
-ನುಲಿಯ ಚಂದಯ್ಯ
































