ಮಂಗಳೂರು: ಕರಾವಳಿಯಲ್ಲಿ ತಾಪಮಾನ ಏರಿಕೆಯಾಗುತ್ತಿರುವುದರ ಮಧ್ಯೆ ಹಲವೆಡೆ ಚಿಕನ್ ಪಾಕ್ಸ್ ಆತಂಕ ಎದುರಾಗಿದ್ದು, ಇದೀಗ ಕಡಬ ತಾಲೂಕು ಒಂದರಲ್ಲೇ ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮಾಹಿತಿ ಪ್ರಕಾರ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು 9 ಮಕ್ಕಳಿಗೆ, ಸುಬ್ರಹ್ಮಣ್ಯದಲ್ಲಿ 6 ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು ಮಗುವಿಗೆ, ಲಾವತ್ತಡ್ಕದಲ್ಲಿ ಒಂದು ಮಗುವಿಗೆ, ಗೊಳಿತ್ತೊಟ್ಟುವಿನಲ್ಲಿ ಒಂದು ಮಗುವಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್ ಪಾಕ್ಸ್ ಹರಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.