ದಾವಣಗೆರೆ : ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಜೂನ್ 5 ರ ಇಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲಾಪಂಚಾಯತ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಇಂದು ಮಧ್ಯಾಹ್ನ 12.15 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್‍ಗೆ ಆಗಮಿಸಿ ಮ.12.30 ಕ್ಕೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಶಿರಮಗೊಂಡನಹಳ್ಳಿಯ ಸುಧಾ ವಿರೇಂದ್ರ ಪಾಟೀಲ್ ಸಮುದಾಯ ಭವನದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 3 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತರಳುವರು.