ನವದೆಹಲಿ : 8ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯಗೊಳಿಸುವ ನೀತಿ ಜಾರಿಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ.
2023ರಲ್ಲೇ ಸಂಸತ್ತಿನ ಅನುಮೋದನೆ ಪಡೆದುಕೊಂಡಿರುವ ಡಿಜಿಟಲ್ ಖಾಸಗಿ ಮಾಹಿತಿ ರಕ್ಷಣಾ ಕಾಯ್ದೆಗೆ ಕೇಂದ್ರ ಸರ್ಕಾರ ಕೆಲವೊಂದು ತಿದ್ದುಪಡಿ ಮಾಡಿ ಹೊಸ ಕರಡು ವರದಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಈ ಮಹತ್ವದ ನಿರ್ಧಾರದ ಬಗ್ಗೆ ಜನರು ಅಭಿಪ್ರಾಯಗಳನ್ನು ತಿಳಿಸಲು ಫೆ.18ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಹೀಗೆ ಸಂಗ್ರಹವಾಗುವ ಅಭಿಪ್ರಾಯಗಳನ್ನು ಆಧರಿಸಿ ಅಂತಿಮ ವರದಿ ಬಿಡುಗಡೆಗೆ ಸರ್ಕಾರ ಮುಂದಾಗಿದೆ.
ಕರಡು ವರದಿ ಅನ್ವಯ, ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯಬೇಕಾದರೆ ಪೋಷಕರ ಅನುಮತಿ ಕಡ್ಡಾಯವಾಗಿದೆ.