ನವದೆಹಲಿ :ಇಸ್ಕಾನ್ನ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆವಹಿಸಬೇಕೆಂದು 68 ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಹಾಲಿ ಸಂಸದರ ಗುಂಪು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.
68 ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳು, ಜಮ್ಮು ಮತ್ತು ಕಾಶ್ಮೀರದ ಮಾಜಿ ಡಿಜಿಪಿ ಶೇಶ್ ಪಾಲ್ ವೈದ್, ಐಎಎಸ್, ಐಪಿಎಸ್,ಐಆರ್‌ಎಸ್, ಐಐಎಸ್, ಐಎಫ್‌ಎಸ್ ಮತ್ತು ರಾಜ್ಯ ಅಧಿಕಾರಿಗಳ ಗುಂಪು. ಇಸ್ಕಾನ್ನ ಚಿನ್ಮಯ್ ಕೃಷ್ಣ ಅವರ ಬಂಧನ ಸೇರಿದಂತೆ ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಬಂಧಿಸಿರುವ ಚಿನ್ಮಯ್ ಕೃಷ್ಣ ದಾಸ್ ಮತ್ತು ಇತರ ಧಾರ್ಮಿಕ ಮುಖಂಡರನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಅವರ ಮೇಲಿನ ಎಲ್ಲಾ ಆರೋಪಗಳನ್ನು ಕೈಬಿಡಬೇಕು ಹಾಗು ಶಾಂತಿಯುತವಾಗಿ ಪ್ರತಿಭಟಿಸುವ ಮತ್ತು ಅವರ ಕಳವಳಗಳನ್ನು ವ್ಯಕ್ತಪಡಿಸುವ ಅವರ ಹಕ್ಕುಗಳನ್ನು ಎತ್ತಿಹಿಡಿಯಬೇಕು ಎಂಬುವುದಾಗಿ ಪತ್ರದಲ್ಲಿ ಬರೆಯಲಾಗಿದೆ.