ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ನ್ಯಾ.ಮೈಕಲ್ ಡಿ.ಕುನ್ಹಾ ಆಯೋಗದ ವರದಿಯನ್ನು ಕ್ಯಾಬಿನೆಟ್ ಒಪ್ಪಿದೆ. ವರದಿಯ ಶಿಫಾರಸಿನಂತೆ ಆರ್‌ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಒಪ್ಪಿಗೆ ನೀಡಿದೆ. ಕೆಎಸ್‌ಸಿಎ ವಿರುದ್ಧವೂ ಕ್ರಿಮಿನಲ್ ಕೇಸ್‌ಗೆ ಒಪ್ಪಿಗೆ ನೀಡಲಾಗಿದೆ.
ಜು.1 ರಂದು ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣದ ತನಿಖಾ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತ್ತು. ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದರು. ವರದಿಯಲ್ಲಿ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‍ಗೆ ಸಮಿತಿ ಶಿಫಾರಸು ಮಾಡಲಾಗಿತ್ತು. ಅಲ್ಲದೇ ಹೆಚ್ಚುವರಿ ತನಿಖೆ, ಘಟನೆಗೆ ಪೊಲೀಸರ ವೈಫಲ್ಯ, ಜೊತೆಗೆ, ಕಾರ್ಯಕ್ರಮದ ಆಯೋಜಕರು ಕಾರಣಕರ್ತರು ಅಂತ ವರದಿಯಲ್ಲಿ ಹೇಳಲಾಗಿತ್ತು.