ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆಗೆ ಚಳ್ಳಕೆರೆ ತಾಲ್ಲೂಕಿನ ಜಾಗನೂರುಹಟ್ಟಿಯ ಟಿ.ಬಿ ರೋಜಾ(27) ಎಂಬುವರು ಡಿಲವರಿಗಾಗಿ ದಾಖಲಾಗಿದ್ದರು. ಇವರಿಗೆ ಅಕ್ಟೋಬರ್.30ರಂದು ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್ ಆಗಿ ಗಂಡು ಮಗು ಜನಿಸಿತ್ತು.
ಡಿಲವರಿ ಆದ 5 ದಿನಗಳ ಬಳಿಕ ಮನೆಗೆ ರೋಜಾ ತೆರಳಿದ್ದರು. ಮಂಗಳವಾರ ಬೆಳಿಗ್ಗೆ ಐದಾರು ಬಾರಿ ವಾಂತಿ ಕಾಣಿಸಿಕೊಂಡಿತ್ತು. ಕೂಡಲೇ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು.
ಇಂತಹ ಬಾಣಂತಿ ರೋಜಾ ಅವರಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ಮಂಗಳವಾರ ಸಂಜೆ ಚಿಕಿತ್ಸೆ ಫಲಿಸದೇ ಅಸುನೀಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.