ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಎಸ್.ಆಕಾಶ್ ಅವರು ಬುಧವಾರ ಅಧಿಕಾರ ಸ್ವೀಕಾರ ಮಾಡಿದರು.
ಜಿ.ಪಂ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಜೆ.ಸೋಮಶೇಖರ್ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ಡಾ.ಎಸ್.ಆಕಾಶ್ ಅವರನ್ನು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕಗೊಳಿಸಿದೆ. ಡಾ.ಎಸ್.ಆಕಾಶ್ ಅವರು 2019ನೇ ಸಾಲಿನ ಕರ್ನಾಟಕ ಕೇಡರ್‍ನ ಐಎಎಸ್ ಅಧಿಕಾರಿಯಾಗಿದ್ದಾರೆ.