ಚಿತ್ರದುರ್ಗ: ಚಿತ್ರದುರ್ಗ ನಗರ ಉಪವಿಭಾಗ ಘಟಕ-1ರ ವ್ಯಾಪ್ತಿಯಲ್ಲಿ ಬರುವ ಎಫ್-08 ಇಂಡಸ್ಟ್ರಿಯಲ್ ಏರಿಯಾ ಮಾರ್ಗದಲ್ಲಿ ಇರುವ 11 ಕೆ.ವಿ ಮಾರ್ಗವನ್ನು ತುರ್ತು ಕಾಮಗಾರಿ ಇರುವುದರಿಂದ ಈ ಮಾರ್ಗದ ಕೆಲವು ಪ್ರದೇಶಗಳಲ್ಲಿ ಜೂನ್ 02ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಚಿತ್ರದುರ್ಗ ನಗರದ ಇಂಡಸ್ಟ್ರಿಯಲ್ ಏರಿಯಾ, ಹಳೇ ಬೆಂಗಳೂರು ರಸ್ತೆ, ಚಳ್ಳಕೆರೆ ಗೇಟ್, ವೇಮನ ನಗರ, ನಾರಾಯಣಪ್ಪ ಲೇ ಔಟ್, ಆದಿಶಕ್ತಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ನಗರ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

































