ಚಿತ್ರದುರ್ಗ : ಯುವಜನರು ಎಲ್ಲ ಬಗೆಯ ದುಶ್ಚಟಗಳನ್ನು ತೊರೆದು, ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್ಪೀರ್ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು ವತಿಯಿಂದ ಶುಕ್ರವಾರ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಸ್ತುತ ದಿನಮಾನಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದಾರೆ. ಇಂತಹ ದುಶ್ಚಟಗಳಿಂದ ಹೊರಬಂದು ಓದು, ಕ್ರೀಡೆ, ಕಲೆ, ಸಾಂಸ್ಕøತಿಕ ಹೀಗೆ ಮುಂತಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಬೇಕು. ಸಿಗುವ ಅವಕಾಶಗಳನ್ನು ಬಳಸಿಕೊಂಡು ಭವಿಷ್ಯದಲ್ಲಿ ಉಜ್ವಲವಾಗಿ ಬೆಳೆಯಬೇಕು, ನಾಡಿಗೆ ಕೀರ್ತಿ ತರುವ ಕಾರ್ಯವನ್ನು ಯುವಜನರು ಮಾಡಬೇಕು ಎಂದರು.
ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಸುಹಾಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಪುರಸ್ಕøತರಾದ ಡಿ.ಶ್ರೀಕುಮಾರ್, ಪ್ರತಾಪ್ ಜೋಗಿ, ಸಿ.ಎನ್.ವೆಂಕಟೇಶ್, ಲಕ್ಷ್ಮೀ, ಹಿರಿಯೂರು ಚಿತ್ತಪ್ಪ ಅವರನ್ನು ಸನ್ಮಾನಿಸಲಾಯಿತು. ಸರ್ಕಾರಿ ವಿಜ್ಞಾನ ಕಾಲೇಜು ಉಪನ್ಯಾಸಕ ನಾಗರಾಜ್ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಅಂತ್ಯೋದಯ ಕಲ್ಚರಲ್ ಪೌಂಡೇಷನ್ ಅಧ್ಯಕ್ಷ ಡಿ.ಓ.ಮುರಾರ್ಜಿ ಸರ್ಕಾರಿ ವಿಜ್ಞಾನ ಕಾಲೇಜಿನ ಬೋದಕ ಮತ್ತು ಬೋದಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.