ಚಿತ್ರದುರ್ಗ : ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಮೂಲಕ ಮಾಡುತ್ತಿರುವ ವಿವಿಧ ಕಾರ್ಯಕ್ರಮ, ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ಚಿತ್ರದುರ್ಗ ಜಿಲ್ಲಾ ನಿಗಮದ 2025-26ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಅನುಮೋದಿತ ಕಾರ್ಯಕ್ರಮಗಳಾದ ಅರಿವು ವಿಧ್ಯಾಭ್ಯಾಸ ಸಾಲ ಯೋಜನೆ, ವಿದೇಶಿ ವಿಧ್ಯಾಭ್ಯಾಸ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವ್ಯಾಪಾರ ಉದ್ದಿಮೆ, ನೇರಸಾಲ ಯೋಜನೆ ಮತ್ತು ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಗಳಿಗೆ ಡಿಸೆಂಬರ್ 15 ರವರೆಗೆ ವಿಸ್ತರಿಸಿ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.kccdclonline.karanataka.gok.in , ಸಹಾಯವಾಣಿ ಸಂಖ್ಯೆ 6360753075 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.































