ಬೆಂಗಳೂರು : ಸಚುವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮೇಲ್ಮನೆಯಲ್ಲಿ ಆಕ್ಷೇಪಣಾ ಪದ ಬಳಕೆ ಪ್ರಕರಣದಲ್ಲಿ ಸಿ.ಟಿ.ರವಿ ವಿರುದ್ಧ ಸಿಐಡಿ ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ. ಸಿ.ಟಿ.ರವಿ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಣೆ ಹಿನ್ನಲೆ ಕೋರ್ಟ್ ಗೆ ಸಿಐಡಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಹೌದು ತನಿಖೆಗೆ ಸಹಕರಿಸುತ್ತಿಲ್ಲ ಎಂದು 42ನೇ ಎಸಿಎಂಎಂ ಕೋರ್ಟ್ ಗೆ ಸಿಐಡಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಸಿ ಸಿ.ಟಿ.ರವಿಗೆ ನೋಟಿಸ್ ಜಾರಿ ಮಾಡಿದ ಕೋರ್ಟ್ ಜನವರಿ. 17 ನೇ ತಾರೀಖು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ತನಿಖೆ ಸಹಕರಿಸುವಂತೆ ಜಾಮೀನು ನೀಡುವಾಗ ಹೈಕೋರ್ಟ್ ಷರತ್ತು ವಿಧಿಸಿತ್ತು. ಆದರೆ ತನಿಖೆಗೆ ಸಹಕಾರ ನೀಡದ ಹಿನ್ನೆಲೆ ಕೋರ್ಟ್ ಮುಂದೆ ಮನವಿ ಮಾಡಲಾಗಿದೆ. ವಾಯ್ಸ್ ಸ್ಯಾಂಪಲ್ ಪಡೆಯಲು ಕೋರ್ಟ್ ಆದೇಶ ಪಡೆಯಲು ಸಿಐಡಿ ಮುಂದಾಗಿದೆ.
