ಕಾರವಾರ: 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪಾಲಿ ಗವಳಿವಾಡ ಗ್ರಾಮದಲ್ಲಿ ನಡೆದಿದೆ.
ಸಾವನ್ನಪ್ಪಿರುವ ವಿದ್ಯಾರ್ಥಿನಿ 13 ವರ್ಷ ವಿದ್ಯಾರ್ಥಿನಿ. 7ನೇ ತರಗಟಿಯಲ್ಲಿ ಓದುತ್ತಿದ್ದಳು. ಮೃತ ವಿದ್ಯಾರ್ಥಿನಿಗೆ ಯಾವುದೇ ಕಾಯಿಲೆಗಳು ಇರಲಿಲ್ಲ. ಹೃದಯ ಸಂಬಂಧಿ ಸಮಸ್ಯೆಯಿಂದ ಕೂಡ ಬಳಲುತ್ತಿರಲಿಲ್ಲ. ಆರೋಗ್ಯವಾಗಿಯೇ ಇದ್ದು, ಎಲ್ಲಾ ಮಕ್ಕಳಂತೆ ನಿತ್ಯ ಆಟ-ಪಾಠಗಳಲ್ಲಿ ತೊಡಗಿಕೊಂಡಿದ್ದಳು. ಸಾವಿಗೂ ಮುನ್ನ ದಿನ ಸಂಜೆವರೆಗೂ ವಿದ್ಯಾರ್ಥಿನಿ ಆಟಆಡುತ್ತಿದ್ದಳು. ಮರುದಿನ ಬೆಳಿಗ್ಗೆ ಎದ್ದಾಗ ವಾಂತಿಯಾಗಿದೆ. ವಾಂತಿ ಮಾಡಿದ ಕೆಲ ಸಮಯದಲ್ಲೇ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ
































