ಹುಬ್ಬಳ್ಳಿ :ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮೃತ ಅಯ್ಯಪ್ಪ ಮಾಲಾಧಾರಿಗಳನ್ನ 58 ವರ್ಷದ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ ಹಾಗೂ 20 ವರ್ಷದ ಸಂಜಯ ಸವದತ್ತಿ ಎಂದು ಗುರುತಿಸಲಾಗಿದೆ. ಉಳಿದ ಏಳು ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು ಬೆಂಗಳೂರು ಮತ್ತಿತರ ಕಡೆಗಳಿಂದ ಉನ್ನತ ಚಿಕಿತ್ಸೆಗಾಗಿ ತಜ್ಞ ವೈದ್ಯರನ್ನು ಕರೆಸಲಾಗಿದೆ.