ಬೆಂಗಳೂರು: ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚಿಸಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಸ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ್ದಾರೆ.
ಈ ವೇಳೆ ವಕ್ಸ್ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿಎಂ, ನೋಟಿಸ್ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಗರಂ ಆಗಿದ್ದಾರೆ.
ರೈತರಿಗೆ ವಕ್ಸ್ ಆಸ್ತಿ ವಿವಾದ ಸಂಬಂಧ, ರೈತರಿಗೆ ನೀಡಿದ ನೋಟಿಸ್‌ಗಳನ್ನು ಕೂಡಲೇ ವಾಪಸ್ ಪಡೆಯಿರಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಕಂದಾಯ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಹಾಗೂ ವಕ್ಸ್ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ವಿಜಯಪುರ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ರೈತರ ಪಹಣಿಗಳಲ್ಲಿ ವಕ್ಸ್ ಎಂದು ನಮೂದಾಗಿದ್ದು ತಕ್ಷಣವೇ ಅದನ್ನು ಹಿಂಪಡೆಯಬೇಕು’ ಎಂದು ಹೇಳಿದ್ದಾರೆ.