ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಇನ್ನು ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವಂತಿಲ್ಲ.
ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಎಲ್ಲಾ ಇಲಾಖೆಯ ಮುಖ್ಯಸ್ಥರಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಅಲ್ಲದೇ ಸರ್ಕಾರದ ಎಲ್ಲಾ ಸಭೆ ಸಮಾರಂಭಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.































