ರಾಜ್ಯದಾದ್ಯಂತ ಹದ್ದು ಮೀರಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯಿಂದ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಸಿಎಂ ಇಂದು ಮೈಕ್ರೋ ಫೈನಾನ್ಸ್ ಕಂಪೆನಿಗಳು, ಸಚಿವರು , RBI ಅಧಿಕಾರಿಗಳ ಸಭೆ ನಡೆಸಿದರು.
ಸಭೆಯಲ್ಲಿ ಅಧಿಕಾರಿಗಳ ಮೇಲೆ ಕೆಂಡಾಮಂಡಲರಾದ ಮುಖ್ಯಮಂತ್ರಿಗಳು, RBI ನಿಯಮ ಮೀರಿ ಸಾಲ ನೀಡುವುದು ಮತ್ತು ಸಾಲ ವಸೂಲಾತಿಗಾಗಿ ಗೂಂಡಾಗಳನ್ನು ಬಳಸಿಕೊಂಡರೆ ಕಠಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆದು ದೂರು ನೀಡಲು ಅವಕಾಶ ನೀಡಲಾಗಿದೆ. ಅಲ್ಲದೆ ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ಕಾಯ್ದೆಯನ್ನು ಶೀಘ್ರದಲ್ಲೇ ಸುಗ್ರೀವಾಜ್ಞೆ ಹೊರಡಿಸಲಾಗುವುದಾಗಿ ತಿಳಿಸಿದರು.