ಕಲಬುರಗಿ : ಮುಂದಿನ ವರ್ಷ ಜ.29 ರಿಂದ ಫೆ.6ರವರೆಗೆ ಕಲಗುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಭಾರತೀಯ ಸಂಸ್ಕೃತಿ ಉತ್ಸವ ನಡೆಯಲಿದೆ. ಈ ಕಾರ್ಯಕ್ರಮ ಆಯೋಜಿಸಿರುವ ಭಾರತ್ ವಿಕಾಸ್ ಸಂಗಮ್ ಸಂಸ್ಥೆಯು ಆರ್ಎಸ್ಎಸ್ನ ಕೆ.ಎನ್.ಗೋವಿಂದಾಚಾರ್ಯ ಅವರೊಂದಿಗೆ ನಂಟು ಹೊಂದಿದೆ. ಭಾರತೀಯ ಸಂಸ್ಕೃತಿ ಸಂರಕ್ಷಣೆಯ ನೆಪದಲ್ಲಿ ಹಿಂದುತ್ವ ಸಿದ್ಧಾಂತ ಪ್ರಚಾರ ನಡೆಸಲಾಗುತ್ತಿದೆ ಎಂಬ ಆರೋಪಗಳಿವೆ. ಹೀಗಾಗಿ ಈ ಉತ್ಸವಕ್ಕೆ ಸಿಎಂ ಹೋಗದಿರಲು ನಿರ್ಧರಿಸಿದ್ದಾರೆಂದು ಹೇಳಲಾಗುತ್ತಿದೆ. ಇದಕ್ಕೆ ಪುಷ್ಠೊಇ ನೀಡುವಂತೆ “ಭಾರತ್ ವಿಕಾಸ್ ಸಂಗಮ್ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿದೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿಕೊಂಡು ಪರಿಶೀಲಿಸಿದ ನಂತರ, ಅದರಲ್ಲಿ ಭಾಗವಹಿಸದೇ ಇರಲು ತೀರ್ಮಾನಿಸಿದ್ದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ.
