ಬೆಂಗಳೂರು : ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದವಿಷಯ ತಿಳಿದು ದುಃಖವಾಯಿತು ಎಂದು ಬರೆದುಕೊಂಡಿದ್ದಾರೆ.
ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು ಎಮದು ಪೋಸ್ಟ್ ಮಾಡಿದ್ದಾರೆ.