ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
CM ಸಿದ್ದರಾಮಯ್ಯ ಧಾರವಾಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲು ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಆರ್.ಟಿ.ಐ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಕ್ಯಾಂಪ್ ಪೊಲೀಸ್ ಠಾಣೆ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.