ಬೆಂಗಳೂರು: ಪಡಿತರ ಚೀಟಿ ಹೊoದಿಲ್ಲದ ಬುಡಕಟ್ಟು ಕುಟುoಬಗಳಿಗೆ 15 ದಿನಗಳ ಒಳಗಾಗಿ ಬಿಪಿಎಲ್ ಪಡಿತರ ಚೀಟಿ ಒದಗಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚಿಸಿದರು.
ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ಇಂದು ಸಿಎಂ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸೂಚಿಸಿದ ಸಿಎಂ, ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಜನರಿಗೆ ಮನೆ, ಕುಡಿಯುವ ನೀರು, ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಸೂಚಿಸಿದರು.
ರಸ್ತೆಗಳ ಅಭಿವೃದ್ಧಿಗೆ ಮತ್ತು ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಯಾವುದೇ ಅಡ್ಡಿ ಉಂಟು ಮಾಡಬಾರದು. ಪ್ರತಿ ಹಾಡಿಯಲ್ಲಿ ಕುಡಿಯುವ ನೀರಿನ ಸoಪರ್ಕ ಕಲ್ಪಿಸಬೇಕು ಎಂದರು. ಅರಣ್ಯ ಹಕ್ಕು ಸಮಿತಿಗಳ ಮುoದೆ ಬಾಕಿಯಿರುವ ಅರ್ಜಿಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು.ಆರೋಗ್ಯ ಇಲಾಖೆಯಲ್ಲಿ ಬುಡಕಟ್ಟು ಜನರನ್ನು ಸ್ಥಳೀಯವಾಗಿ ನೇಮಕ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.