ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸಚಿವ ಎಂ.ಸಿ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ ಜಿಲ್ಲೆ ಪ್ರವಾಸ ಕೈಗೊಂಡಿದ್ದರು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮದ ಭೇಟಿ ರದ್ದುಪಡಿಸಲಾಗಿದೆ.