ಮೈಸೂರು: ಬಾನು ಮುಷ್ತಾಕ್ ಮುಸ್ಲಿಮ್ ಮಹಿಳೆ ಯಾಗಿದ್ದು, ಅವರ ಧರ್ಮದಲ್ಲಿ ಕುಂಕುಮ ಹಚ್ಚುವ ಪದ್ಧತಿ ಇಲ್ಲ. ನಾವು ದಸರಾವನ್ನು ನಾಡಹಬ್ಬ ಎಂದು ಆಚರಿಸುತ್ತೇವೆ. ಅದಕ್ಕೆ ಬೇರೆ ಧರ್ಮದವರು ಉದ್ಘಾಟಕರಾದರೆ ಕುಂಕುಮ ಹಚ್ಚಿ ಬನ್ನಿ, ಹಿಂದೂಗಳಾಗಿ ಬನ್ನಿ ಎನ್ನುವುದು ಸರಿಯಲ್ಲ ಎಂದು ಸಿ ಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿಯ ವಿರೋಧಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಾನು ಮುಷ್ತಾಕ್ ಅವರ ಕುಂಕುಮದ ಬಗ್ಗೆ ಮಾತನಾಡಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಅವರು ಕನ್ನಡದ ಬರಹಗಾರ್ತಿ. ಕನ್ನಡದ ಮೇಲೆ ಪ್ರೀತಿ ಇಲ್ಲದೆ ಅವರು ಕನ್ನಡದಲ್ಲಿ ಬರೆಯುವರೇ ಎಂದು ಪ್ರಶ್ನೆ ಮಾಡಿದ್ದಾರೆ.
ದಿವಾನ್ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು ಅಂಬಾರಿ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡುತ್ತಿದ್ದರು. ಆಗ. ಆರೆಸ್ಸೆಸ್ ಹಾಗೂ ಬಿಜೆಪಿಯವರು ಎಲ್ಲಿ ಹೋಗಿದ್ದರು? ಹಿಂದೆ ಕವಿ ನಿಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಿದ್ದರು. ಆಗ ಇವರೆಲ್ಲ ಎಲ್ಲಿ ಹೋಗಿದ್ದರು? ಎಂದು ಪ್ರಶ್ನಿಸಿದ್ದಾರೆ