ಬೆಂಗಳೂರು : ಮಂಗಳೂರಿನ ಕ್ರಿಕೆಟ್ ಮೈದಾನದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ವ್ಯಕ್ತಿಯನ್ನು ಗುಂಪೊಂದು ಕೊಲೆ ನಡೆಸಿತ್ತು.
ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದರೂ ತಪ್ಪೇ ಅದು ದೇಶದ್ರೋಹದ ಕೃತ್ಯ, ಮಂಗಳೂರಿನ ಕುಡುಪುವಿನಲ್ಲಿ ನಡೆದ ಗುಂಪು ಹಲ್ಲೆ ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಮತ್ತು ಈ ಪ್ರಕರಣದಲ್ಲಿ 15 ಜನರನ್ನು ಬಂಧಿಸಲಾಗಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಏಪ್ರಿಲ್ 27 ರಂದು ಕುಡುಪು ಪ್ರದೇಶದ ಕಲ್ಲುರ್ಟಿ ದೇವಸ್ಥಾನದ ಬಳಿ ಸ್ಥಳೀಯ ಕ್ರಿಕೆಟ್ ಪಂದ್ಯದ ವೇಳೆ “ಪಾಕಿಸ್ತಾನ ಜಿಂದಾಬಾದ್” ಎಂದು ಕೂಗಿದ ಬಳಿಕ ಆ ವ್ಯಕ್ತಿಯನ್ನು ಒಂದು ಗುಂಪು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 20 ಜನರನ್ನ ಬಂಧಿಸಲಾಗಿದೆ. ಬಂಧಿಸುವವರು ಆತನೇ ಪಾಕ್ ಪರ ಘೋಷಣೆ ಕೂಗಿದ್ದ ಎಂದಿದ್ದಾರೆ.
ಆ ರೀತಿ ಹೇಳಿದ್ದಕ್ಕೆ ಹೊಡೆದೆವು ಎಂದು ಹೇಳಿಕೆ ನೀಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.