ಮಂಡ್ಯ : ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ. ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಟಕ್ಕರ್ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಬಂಡಬೋಯಿನಹಳ್ಳಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ. ನಮ್ಮ ಮಧ್ಯೆ ಯಾವ ಒಪ್ಪಂದವೂ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದವಾಗಿದ್ದು ನಿಜ- ಡಿಕೆಶಿ
ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಡಿಕೆಶಿ ಅವರು, ಕರ್ನಾಟಕದಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಅಧಿಕಾರ ಹಂಚಿಕೆಗೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ. ಸಮಯ ಬಂದಾಗ ಆ ಬಗ್ಗೆ ಬಹಿರಂಗಪಡಿಸುವೆ ಎಂದಿದ್ದರು.
ನಾನೀಗ ಡಿಸಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಸಿಎಂ ಹುದ್ದೆ ಬಗ್ಗೆ ಈಗ ಮಾತನಾಡುವುದಿಲ್ಲ. ರಾಜ್ಯದ ಹಿತಕ್ಕಾಗಿ ಸಿದ್ದರಾಮಯ್ಯ ಹಾಗೂ ನಾನು ಜತೆಯಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಾಗೆಂದು, ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದವಾಗಿದ್ದು ನಿಜ. ಆ ಕುರಿತು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ತಿಳಿಸುವೆ ಎಂದು ಹೇಳಿದ್ದರು.