ಬೆಂಗಳೂರು : ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು, ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆಯುತ್ತಿದ್ದಾರೆ.ಈ ಸಂವಾದದಲ್ಲಿ ಗೃಹ ಸಚಿವರಾದ ಡಾ ಜಿ ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ರೇವಣ್ಣ, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತರಾದ ದಯಾನಂದ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.
