ಬೆಂಗಳೂರು: ಸಂಪುಟ ಸಹೋದ್ಯೋಗಿಯಾದ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ವಿಚಾರ ತಿಳಿಯಿತು. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇಬ್ಬರೂ ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಸಿದ್ದರಾಮಯ್ಯ ಟ್ಚೀಟ್ ಮಾಡಿ ಹಾರೈಸಿದ್ದಾರೆ.
ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಂಗಳವಾರ ಬೆಳಗ್ಗೆ ಬೆಳಗಾವಿ ಬಳಿ ಕಾರು ಅಪಘಾತಕ್ಕೀಡಾಗಿದೆ. ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ಕೂಡ ಅದೇ ಕಾರಲ್ಲಿ ಪ್ರಯಾಣಿಸುತ್ತಿದ್ದರು.ಈ ವೇಳೆ ಕಾರು, ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಹೆಬ್ಬಾಳ್ಕರ್ ಮತ್ತು ಹಟ್ಟಿಹೊಳಿ ಇಬ್ಬರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಗಾಯಗೊಂಡಿರುವ ನಾಯಕರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ.