ಇಂದು ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೆಹಲಿಯ ಮುಂದಿನ ಸಿಎಂ ಯಾರು ಎಂಬುದಕ್ಕೆ ತೆರೆ ಬೀಳಲಿದೆ.
ಸದ್ಯದ ಬೆಳವಣಿಗೆಗಳ ಪ್ರಕಾರ ಕೇಜ್ರಿವಾಲ್‌ರನ್ನು ಸೋಲಿಸಿದ್ದ ಪರ್ವೇಶ್ ವರ್ಮಾ ಸಿಎಂ ರೇಸ್‌ನಿಂದ ಹೊರಬಿದ್ದಿದ್ದಾರೆ ಎನ್ನಲಾಗಿದೆ.
ರೇಖಾ ಗುಪ್ತಾ, ಸತೀಶ್ ಉಪಾಧ್ಯಾಯ ಮತ್ತು ಶಿಖಾ ರಾಯ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿವೆ. ಬಿಜೆಪಿ ಯುವ ಮೋರ್ಚಾದ ದೆಹಲಿ ಘಟಕದ ಕಾರ್ಯದರ್ಶಿಯಾಗಿರುವ ರೇಖಾ ಗುಪ್ತಾ ಹೆಸರು ಮುಂಚೂಣಿಯಲ್ಲಿದ್ದು ಅವರೇ ಸಿಎಂ
ಆಗುವ ಸಾಧ್ಯತೆಗಳು ಹೆಚ್ಚಿವೆ ಎನ್ನುತ್ತಿವೆ ರಾಜಕೀಯ ಮೂಲಗಳು.