ಬೆಂ.ಗ್ರಾ.ಜಿಲ್ಲೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನೆ ಸಹಾಯಕರ (ಜೆಆರ್ಎಫ್) ಅರ್ಹತಾ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಛೇರಿಯಲ್ಲಿ 45 ದಿನಗಳ ಕಾಲ ತರಬೇತಿಯನ್ನು ನೀಡಲಾಗುತ್ತದೆ.
ಆಸಕ್ತರು ಏ. 24 ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಯನ್ನು ಸಂಪರ್ಕಿಸಲು ಕರಾಮುವಿ ಕುಲಸಚಿವ ಪ್ರೂ. ನವೀನ್ ಕುಮಾರ್ ಎಸ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

































