ದಕ್ಷಿಣ ಕನ್ನಡ :ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸಿ ಜನರನ್ನ ಹೈರಾಣಾಗಿಸಿದೆ.
ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಹಿನ್ನಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ದಿನಾಂಕ 3 ಡಿಸೆಂಬರ್ ಮಂಗಳವಾರದಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಫೆಂಗಲ್ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿಯೂ ಅತಿಯಾದ ಚಳಿ, ಶೀತಗಾಳಿ ಬೀಸುತ್ತಿದ್ದು, ಸಾರ್ವಜನಿಕರು ಬೆಚ್ಚಗಿನ ಉಡುಪುಗಳನ್ನು ಧರಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅವಶ್ಯವಿದ್ದರಷ್ಟೇ ಮನೆಯಿಂದ ಹೊರ ಹೋಗಬೇಕು ಎಂದು ಸೂಚನೆ ನೀಡಲಾಗಿದೆ.