ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿಪೂರ್ವ ಕಾಲೇಜಿಗೆ 2023-24ನೇ ಸಾಲಿಗೆ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಎಸ್‍ಎಸ್‍ಎಲ್‍ಸಿಯಲ್ಲಿ ತೇರ್ಗಡೆ ಹೊಂದಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ.25 ಅಂತಿಮ ದಿನಾಂಕವಾಗಿದೆ. ಅಂತಿಮ ದಿನಾಂಕದ ಒಳಗಾಗಿ ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯ 3ನೇ ಕ್ರಾಸ್‍ನಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿಪೂರ್ವ ಕಾಲೇಜಿನಲ್ಲಿ ಅರ್ಜಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.