ನವದೆಹಲಿ : ವಾಣಿಜ್ಯ ವಲಯದವರಿಗೆ ಸಿಹಿ ಸುದ್ದಿ.. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ.ತೈಲ ಮಾರುಕಟ್ಟೆಗಳಿಂದ ಬೆಲೆ ಪರಿಷ್ಕರಣೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 58.50 ರೂ.ಗಳಷ್ಟು ಕಡಿಮೆಯಾಗಿದ್ದು, ಇಂದಿನಿಂದಲೇ (ಜು.1) ಜಾರಿಗೆ ಬರಲಿದೆ.
ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಹೊಸ ಚಿಲ್ಲರೆ ಬೆಲೆ ಈಗ 1,665 ರೂ. ಗಳಾಗಿದ್ದು, ಈಗಾಗಲೇ ಹೆಚ್ಚುತ್ತಿರುವ ಇನ್‌ಪುಟ್ ವೆಚ್ಚಗಳೊಂದಿಗೆ ಹೋರಾಡುತ್ತಿರುವ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಅಡುಗೆ ತಯಾರಿಕರು ನಿಟ್ಟುಸಿರು ಬಿಡುವಂತಾಗಿದೆ. 14.2 ಕೆಜಿ ದೇಶೀಯ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.