ಬೆಂಗಳೂರು: ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ವಿವರಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕೆಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಇದರ ಜೊತೆಗೆ ಕೆಲವು ಸೂಚನೆಗಳನ್ನು ನೀಡಿದೆ.
ಏಪ್ರಿಲ್‌ನಿಂದ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು. ಮಗು ಹಿಂದೆ ಓದುತ್ತಿದ್ದ ಶಾಲೆ ತೊರೆದು ಬೇರೆ ಶಾಲೆಗೆ ಪ್ರವೇಶ ಪಡೆದರೆ ತಕ್ಷಣವೇ ವರ್ಗಾವಣೆ ಪತ್ರ ನೀಡಬೇಕು.
ಸಿಬಿಎಸ್‌ಸಿ, ಐಸಿಎಸ್‌ಸಿ ಪಠ್ಯಕ್ರಮದ ಶಾಲೆಗಳೂ ಈ ನಿಯಮ ಪಾಲಿಸಬೇಕು. ಮಗುವಿನ ಪ್ರವೇಶಕ್ಕೆ ಪೋಷಕರಿಗೆ ಪ್ರವೇಶ ಪರೀಕ್ಷೆ ನಡೆಸಬಾರದು ಎಂದು ಹೇಳಿದೆ.