ಚಿತ್ರದುರ್ಗ; ನಾಲ್ಕು ತಿಂಗಳಿಂದ ಜೈಲು ಪಾಲಾಗಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಷರತ್ತುಗಳು
ನ್ಯಾಯಾಲಯವು ಜಾಮೀನು ನೀಡುವಾಗ ಕೆಲವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ:
ತನಿಖಾಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕು.
ಸಾಕ್ಷ್ಯನಾಶಪಡಿಸಲು ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು.
ನ್ಯಾಯಾಲಯದ ಅನುಮತಿ ಇಲ್ಲದೆ ವಿದೇಶ ಪ್ರವಾಸ ಮಾಡುವಂತಿಲ್ಲ.

































