ನವದೆಹಲಿ : ಮಾಜಿ ಪ್ರಧಾನಿ ದಿವಂಗತ ಮನಮೋಹನ್ ಸಿಂಗ್ ಅವರ ನಿಧನ ಬಳಿಕ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎನ್ನುವ ಬೇಡಿಕೆ ಹೆಚ್ಚುತ್ತಿದೆ.
ಭಾರತ ರತ್ನ ನೀಡುವಂತೆ ಒತ್ತಾಯಿಸಿ ತೆಲಂಗಾಣ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿ ಕೇಂದ್ರಕ್ಕೆ ಒತ್ತಡ ಹಾಕಿದ ಬೆನ್ನಲ್ಲೇ ಈ ಚರ್ಚೆ ಮುನ್ನಲೆಗೆ ಬಂದಿದೆ.
ಮನಮೋಹನ್ ಸಿಂಗ್ ಅವರು ನಮ್ಮ ದೇಶದ ಮಹಾನ್ ನಾಯಕರಾಗಿದ್ದು, ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು. ಕೇಂದ್ರ ಸರ್ಕಾರ ತೆಲಂಗಾಣ ವಿಧಾನಸಭೆ ನಿರ್ಣಯವನ್ನು ಅಂಗೀಕರಿಸುವಂತೆ ನಾನು ಕೇಂದ್ರವನ್ನು ಒತ್ತಾಯಿಸುತ್ತೇನೆ ಎಂದು ರಾಜ್ಯಸಭೆಯ ಕಾಂಗ್ರೆಸ್ ಉಪನಾಯಕ ಪ್ರಮೋದ್ ತಿವಾರಿ ಒತ್ತಾಯಿಸಿದ್ದಾರೆ.