ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಆಸ್ಪತ್ರೆಯ ವಿವರಗಳ ಪ್ರಕಾರ, ಸೋನಿಯಾ ಗಾಂಧಿ ಚೆನ್ನಾಗಿದ್ದಾರೆ ಮತ್ತು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಇದು ದಿನನಿತ್ಯದ ತಪಾಸಣೆಗೆ ಸಂಬಂಧಿಸಿದ ದಾಖಲೆ , ಅವರಿಗೆ ದೀರ್ಘಕಾಲದಿಂದ ಕೆಮ್ಮಿನ ಸಮಸ್ಯೆ ಇದ್ದು ನಿಯಮಿತ ತಪಾಸಣೆಗಾಗಿ ಅವರು ಆಸ್ಪತ್ರೆಗೆ ಬರುತ್ತಿದ್ದರು. ನಗರದ ಮಾಲಿನ್ಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಗಾಂಧಿ ಅವರಿಗೆ 79 ವರ್ಷವಾಗಿದೆ.

































