ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ಖಚಿತ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತ ಶೀಘ್ರದಲ್ಲೇ ಕೊನೆಗೊಳ್ಳಲಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ.
ದೇಶವ್ಯಾಪಿ ಕಮಿಷನ್, ಭ್ರಷ್ಟಾಚಾರ ಎಂದರೆ, ಕರ್ನಾಟಕದ ಬಿಜೆಪಿ ಸರ್ಕಾರವನ್ನು ನೆನೆಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.